ಸರ್ಕಾರದ ವಿರುದ್ಧ ಎಚ್ ಡಿ ಕೆ ಆಕ್ರೋಶ!

ಸರ್ಕಾರದ ವಿರುದ್ಧ ಎಚ್ ಡಿ ಕೆ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಕೇವಲ ಮಾತಿನ ಮಂಟಪ ಕಟ್ಟುವಲ್ಲಿ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊರೋನಾ ಸೋಂಕು ಪೀಡಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಮನೆಯಲ್ಲಿ ಸಾಯುತ್ತಿದ್ದಾರೆ. ಆರಂಭಿಕ ಹಂತದಿಂದಲೇ ಕೊರೋನಾ ವೈರಸ್ ಹಾವಳಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ವೈರಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

Related