ಕಿಡ್ನಿ ಸಮಸ್ಯೆ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ಪರಿಹಾರ; ಸಿಎಂ

ಕಿಡ್ನಿ ಸಮಸ್ಯೆ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ಪರಿಹಾರ; ಸಿಎಂ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣ ದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಏರ್ಪಾಟು ಮಾಡಲಾಗಿತ್ತು, ಈ ಸಂದರ್ಭದಲ್ಲಿ ಕಿಡ್ನಿ ಸ್ಟೋನ್ ಹೊಂದಿರುವ ವ್ಯಕ್ತಿಗೆ ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ನೀಡಿದ್ದಾರೆ.

ಹೌದು ಸಿಎಂ ಸಿದ್ದರಾಮಯ್ಯ ಅವರು ಜನತಾದರ್ಶನದಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಅದರಂತೆ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಸವರಾಜ್ ಎಂಬವರಿಗೆ ಸಿಎಂ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ನೀಡಲು ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

Related