ಇಂದಿನಿಂದ 10ನೇ ತರಗತಿ ಪರೀಕ್ಷೆ ಪ್ರಾರಂಭ

ಇಂದಿನಿಂದ 10ನೇ ತರಗತಿ ಪರೀಕ್ಷೆ ಪ್ರಾರಂಭ

ಬೆಂಗಳೂರು: ಇದರಿಂದ ರಾಜ್ಯದಂತೆ 10ನೇ ತರಗತಿಯ ಪರೀಕ್ಷೆ ಪ್ರಾರಂಭವಾಗಿದ್ದು ಸುಮಾರು 8.10 ಲಕ್ಷ ವಿದ್ಯಾರ್ಥಿಗಳು ಇಂದಿನಿಂದ 10ನೇ ತರಗತಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದಳು ಪರೀಕ್ಷೆ ಬರೆಯುತ್ತಿದ್ದಾರೆ.

ಇನ್ನು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ನೀರು, ವಿದ್ಯುತ್, ಕುಳಿತುಕೊಳ್ಳುವ ಸ್ಥಳ, ಫ್ಯಾನ್ ಹೀಗೆ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೂಢಿ ಪರೀಕ್ಷೆಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಅನುತ್ತೀರ್ಣರಾಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆ ರೂಢಿ ಪರೀಕ್ಷೆ ಎಂಬ ವಿನೂತನ ಪ್ರಯತ್ನವನ್ನು ಮಾಡಿದೆ.

ಇದು ಮಾತ್ರವಲ್ಲದೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಕೂಡ ಶಿಕ್ಷಣ ಸಂಸ್ಥೆ ಒದಗಿಸುತ್ತಿದೆ.

Related