Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭೀಕರ ಅಪಘಾತಗಳಲ್ಲಿ 14 ಮಂದಿ ಸಾವು: ಸಿಎಂ ಸಂತಾಪ
  • Crime
  • State

ಭೀಕರ ಅಪಘಾತಗಳಲ್ಲಿ 14 ಮಂದಿ ಸಾವು: ಸಿಎಂ ಸಂತಾಪ

admin January 22, 2025 1 minute read
Spread the love

ಯಲ್ಲಾಪುರ: ರಾಜ್ಯದಲ್ಲಿ ಇತ್ತೀಚೆಗೆ ಆಕ್ಸಿಡೆಂಟ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಮತ್ತೆ ಇದೀಗ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರುನಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತ ಸಂಭವದಲ್ಲಿ ಸುಮಾರು 14 ಜನ ಮೃತಪಟ್ಟಿದ್ದು ಇನ್ನೂ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನು ಈ ಅಪಘಾತದಲ್ಲಿ ಸಾವನ್ನಪ್ಪಿರುವ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಸರ್ಕಾರದಿಂದ ಮೃತ ಕುಟುಂಬಕ್ಕೆ ಪರಿಹಾರ ಒದಾಗಲಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಸರ್ಕಾರದಿಂದ ಮೃತ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಮಾವೇಶಕ್ಕೆ ಆರ್ ಅಶೋಕ್ ವ್ಯಂಗ್ಯ!

ಘಟನೆ

ಉತ್ತರ ಕನ್ನಡ ಜಿಲ್ಲೆ ಎಲ್ಲಾಪುರ ತಾಲೂಕಿನ ಗುಳ್ಳಾಪುರದ ಬಳಿ ಲಾರಿ ಪಲ್ಟಿಯಲ್ಲಿ 14 ಮಂದಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ನಡೆದಿದೆ. ಕುಮಟಾ ಎಂಬ ಸಂತೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿಗಳನ್ನು ಹಾಕಿಕೊಂಡು ಬರುತ್ತಿರುವಾಗ ನ್ಯಾಷನಲ್ ಹೈವೇ 63 ರಲ್ಲಿ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಸುಮಾರು 28 ವ್ಯಾಪಾರಸ್ಥರು ಇದ್ದರು ಇವರು ಸವಣೂರು ತಾಲೂಕಿನ ವ್ಯಾಪಾರಿಗಳು ಅದೇ ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಮಾರಾಟ ಮಾಡುವ ತರಕಾರಿ ಮತ್ತು ಹಣ್ಣುಗಳನ್ನು ಲಾರಿಯಲ್ಲಿ ಹಾಕಿಕೊಂಡು ಬರುವ ಸಂದರ್ಭದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 10 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಇನ್ನುಳಿದ ಲಾರಿಯಲ್ಲಿದ್ದ 18 ವ್ಯಾಪಾರಿಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು ಹತ್ತಿರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.

ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…

— CM of Karnataka (@CMofKarnataka) January 22, 2025

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ ಸಮಾವೇಶಕ್ಕೆ ಆರ್ ಅಶೋಕ್ ವ್ಯಂಗ್ಯ!
Next: ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಕೇಸ್ ಸದ್ದು..!

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.