17ರ ನಂತರ ಬಸ್ ಸೇವೆ ಪುನರಾರಂಭ

17ರ ನಂತರ ಬಸ್ ಸೇವೆ ಪುನರಾರಂಭ

ಬೆಂಗಳೂರು: ಪ್ರಯಾಣಿಕರ ರೈಲು ಸಂಚಾರ ಆರಂಭಿಸಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಆಯಾ ಸ್ಥಳಗಳಿಗೆ ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ರಸ್ತೆ ನಿಗಮಗಳು ಸಿದ್ಧತೆಯಲ್ಲಿ ತೊಡಗಿವೆ. ಮೇ 17ರ ವೇಳೆಗೆ ಬಸ್ ಸೇವೆ ಆರಂಭವಾಗುವ ಸಾಧ್ಯತೆ ಇದೆ. ಶೀಘ್ರದಲ್ಲೇ ಹೊರರಾಜ್ಯಗಳಿಗೆ ಬಸ್ ಸಂಚಾರ ಆರಂಭವಾಗುವ ದಿನಾಂಕ ಪ್ರಕಟಿಸಲಿದೆ.

ಈ ನಡುವೆ ರಾಜ್ಯದ ಆಯ್ದ ಭಾಗಗಳಿಗೆ ಬಸ್ ಕಾರ್ಯಚರಣೆಗೊಳಿಸಲು ಸಿದ್ಧತೆಯಲ್ಲಿ ತೊಡಗಿದೆ. ರಾಜ್ಯದ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚರಿಸಲು ಅಂತರ್ ಜಿಲ್ಲಾ ಪಾಸ್ ಬೇಕಿಲ್ಲವೆಂದು ಹೇಳಲಾಗಿದೆ. ಬೆಂಗಳೂರು ನಗರ ಒಳಗೊಂಡಂತೆ 6 ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದ್ದು, ಈ ಘಟಕದಲ್ಲಿ ಜನ ಮತ್ತು ವಾಹನಗಳ ಸಂಚಾರಕ್ಕೆ ಪಾಸ್ ಅವಶ್ಯಕತೆ ಇಲ್ಲ, ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ಮತ್ತು ಉದ್ಯೋಗಿಗಳಿಗೆ ತಮ್ಮ ಸಂಸ್ಥೆಯ ಅಧಿಕೃತ ಗುರುತಿನ ಚೀಟಿ ಇದ್ದರೆ ಅಂತರಜಿಲ್ಲಾ ಪಾಸ್ ಅವಶ್ಯಕತೆ ಇರುವುದಿಲ್ಲ ಎನ್ನಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ತುಮಕೂರು ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದೆ. ಇದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಂದು ಘಟಕವೆಂದು ಪರಿಗಣಿಸಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಂಚರಿಸಬಹುದು.

Related