ಶುಭ ಕೋರಿದ ಸಿ.ಎಂ

ಶುಭ ಕೋರಿದ ಸಿ.ಎಂ

ಗಾಂಧಿನಗರ: ಗುಜರಾತಿನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದರು.
ರಾಜಭವನದಲ್ಲಿ ನೂತನ ಸಿಎಂ ಪಟೇಲ್ ಅವರನ್ನು ಭೇಟಿ ಮಾಡಿದರು. ವಿಶೇಷ ವಿಮಾನದ ಮೂಲಕ ಗಾಂಧಿನಗರಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ಎದುರಿಸುವಂತೆ ಶುಭ ಕೋರಿದರು. ಮುಖ್ಯಮಂತ್ರಿಗಳೊAದಿಗೆ ತೆರಳಿದ್ದ ಸಚಿವರಾದ ಆರ್ ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್‌ರವರು ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಶುಭಾಶಯ ಕೋರಿದ್ದಾರೆ.
ಕೇಂದ್ರ ಗೃಹ ಅಚಿವ ಅಮಿತ್ ಷಾ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಿದರು.

Related