ಪಟಾಕಿ ಸಿಡಿತಕ್ಕೆ 26 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲು

ಪಟಾಕಿ ಸಿಡಿತಕ್ಕೆ 26 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲು

ಬೆಂಗಳೂರು,ನ.14: ದೀಪಾವಳಿ ಹಬ್ಬ ಎಂದರೆ ಸಡಗರ ಸಂಭ್ರಮವಾಗಿದೆ. ದೀಪ ಬೆಳಗಿಸಿ, ಪಟಾಕಿ ಸಿಡಿಸಿ ಸಂಬ್ರಮದಿಂದ ಆಚರಿಸುತ್ತಾರೆ. ಆದರೆ, ಹಬ್ಬದ ಮೊದಲ ದಿನ ಪಟಾಕಿ ಸಿಡಿತಕ್ಕೆ ಬೆಂಗಳೂರಿನಲ್ಲಿ 26 ಜನ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಟಾಕಿ ಸಿಡಿದು ರವಿವಾರ ಒಂದೇ ದಿನ ಮಕ್ಕಳು ಸೇರಿದಂತೆ 26 ಜನರು ಗಾಯಗೊಂಡಿದ್ದು ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಚಿಕ್ಸಿತ್ಸೆ ಪಡೆಯುತ್ತಿದ್ದಾರೆ.

ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾತನಾಡಿ, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಚಿಕ್ಸಿತ್ಸೆ ಪಡೆಯುತ್ತಿದ್ದಾರೆ. 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಿಂಟೋ ಆಸ್ಪತ್ರೆಗೆ ದಾಖಲಾದ ನಾಲ್ವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಿಂಟೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

Related