ಇಂದು 2nd ಪಿಯುಸಿ ಫಲಿತಾಂಶ

ಇಂದು 2nd ಪಿಯುಸಿ ಫಲಿತಾಂಶ

ಬೆಂಗಳೂರು: 2024ನೆಯ ಸಾಲಿನ ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಸುದ್ದಿ ಹೊರಡಿಸಿದೆ.

ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಎಲ್ಲಾ ವಿಷಯದ ಫಲಿತಾಂಶ ಏಕಕಾಲಕ್ಕೆ ಹೊರಬೀಳಲಿದ್ದು ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ತಮ್ಮ ಮೊಬೈಲ್ನಲ್ಲೇ 11 ಗಂಟೆಯ ನಂತರ https://karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದರ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತಿದೆ.

ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫಲಿತಾಂಶ ಹೇಗೆ ನೋಡುವುದು?

ಹಂತ 1: ನೀವು karresults.nic.in ಪಿಯುಸಿಯ ಸಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡ್ಬೇಕು (ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ)

ಹಂತ 4: ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.

ಹಂತ 5: ಈಗ ನೀವು ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

Related