ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಧನಾ ಸಮಾರಂಭವನ್ನು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಕಾಂಗ್ರೆಸ್ನ ಶಾಸಕರು, ಸಚಿವರು ಸೇರಿದಂತೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧನಾ ಸಮಾರಂಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಿದ್ದಾರೆ.
ಹೌದು, ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ವಿಜಯನಗರದಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಯಶಸ್ವಿಯಾಗಿ ಪೂರೈಸುತ್ತದೆ.
ಈ ಹಿನ್ನೆಲೆ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಸವಲತ್ತುಗಳ ವಿತರಣಾ ಸಮಾವೇಶವೂ ನಡೆಯಲಿದೆ. ಎಲ್ಲಾ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ವಿಜಯನಗರದತ್ತ ಮುಖ ಮಾಡಿದ್ದಾರೆ.
ಇನ್ನು ರಾಜ್ಯದ ಬಹುತೇಕ ಜಿಲ್ಲೆಗಳಿಂದ ಕಾರ್ಯಕರ್ತರು, ಜನರು ಹೊಸಪೇಟೆಯತ್ತ ಸಾಗಲಿದ್ದು, ಸಮಾವೇಶ ಮಹತ್ವ ಪಡೆದಿದೆ. ಇದನ್ನೂ ಓದಿ: ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ
ಈ ಸಮಾವೇಶ 200 ಅಡಿ ಅಗಲ, 70 ಅಡಿ ಉದ್ದದ ಪ್ರಧಾನ ವೇದಿಕೆಯಲ್ಲಿ 300 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಮೊದಲ ಕಿರು ವೇದಿಕೆಯಲ್ಲಿ 50 ಮಾಜಿ ಸಚಿವರಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಇನ್ನೊಂದರಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖ 50 ಗಣ್ಯರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ.
