ಬೆಳಗಾವಿ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಇಡೀ ದೇಶದ ಮೂಲೆ ಮೂಲೆಯಿಂದ ಜನರು ಹೋಗಿ ಮಹಾಕುಂಭ ಮೇಳದಲ್ಲಿ ಭಾಗಿಯಾಗುತ್ತಿದ್ದಾರೆ.
ಇನ್ನು ಕರ್ನಾಟಕ ರಾಜ್ಯದಿಂದ ಹಲವಾರು ಜನ ಈಗಾಗಲೇ ಮಹಾಕುಂಭ ಮೇಳದಲ್ಲಿ ಭಾಗವಹಿಸಿ ಅಲ್ಲಿನ ಸೊಗಡನ್ನು ಕಣ್ಣು ತುಂಬಿಕೊಂಡು ಬಂದಿದ್ದಾರೆ. ಬೆಳಗಾವಿ ಮೂಲದ ತಾಯಿ, ಮಗಳು ಸೇರಿದಂತೆ ನಾಲ್ವರು ಮಹಾ ಕುಂಭಮೇಳಕ್ಕೆ ಹೋಗಿದ್ದವರು ಇದೀಗ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಕ್ಕಳ ಮನೆ ಇಸ್ಕೂಲ್ ಅಲ್ವೇ
ಹೌದು, ಇಂದು (ಬುಧವಾರ ಜ. 29) ಮೌನಿ ಅಮಾವಾಸ್ಯೆ ಪ್ರಯುಕ್ತ ಮಹಾ ಕುಂಭಮೇಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ನೂಕು ನುಗ್ಗಾಟದಲ್ಲಿ ಕಲ್ತುಳಿತವಾಗಿ ಬೆಳಗಾವಿಯ ನಾಲ್ಕು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ(50) ಮತ್ತು ಅವರ ಮಗಳು ಮೇಘಾ(18) ಹತ್ತರವಾಠ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ.
ಇದೀಗ ಬಂದ ಮಾಹಿತಿಯ ಪ್ರಕಾರ, ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಹಾಗೂ ಮಹಾದೇವಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
