ಇಂದು ಕಾಂಗ್ರೆಸ್ ನ 5ನೇ ಗ್ಯಾರಂಟಿ ಯೋಜನೆಗೆ ಚಾಲನೆ

ಇಂದು ಕಾಂಗ್ರೆಸ್ ನ 5ನೇ ಗ್ಯಾರಂಟಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹತ್ವದ ಗ್ಯಾರಂಟಿ ಆದ ಯುವನಿಧಿಗೆ ಯೋಜನೆಗೆ ಇಂದು (ಡಿಸೆಂಬರ್ 26) ರಂದು ಬೆಳಿಗ್ಗೆ 11 ಘಂಟೆಗೆ ವಿಧಾನಸೌಧದ ಬ್ಯಾರಿಗೆಟ್ ಹಾಲಿನಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ಚಾಲನೆ ನೀಡಲಾಗುತ್ತಿದೆ..

ಹೌದು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿ ಮಾಡಿ ರಾಜ್ಯದ ಜನತೆಯ ವಿಶ್ವಾಸವನ್ನು ಗಳಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಗ್ಯಾರಂಟಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ.

ಇಂದಿನಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರತಿಕ್ರಿಯೆ ಪ್ರಾರಂಭವಾಗಿದ್ದು ಪದವೀಧರರು ಮತ್ತು ಡಿಪ್ಲೋಮೋ ಮುಗಿಸಿರುವಂತಹ ವಿದ್ಯಾರ್ಥಿಗಳು ಇದಕ್ಕೆ ಅರ್ಜಿಯನ್ನು ಸಲ್ಲಿಸಬಹುದೆಂದು ಹೇಳಲಾಗುತ್ತಿದೆ.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಯುವನಿಧಿ ಯೋಜನೆಯ ಪೋಸ್ಟರ್‌ ಅನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಗೋವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅನಾವರಣಗೊಳಿಸಲಿದ್ದಾರೆ. ಸ್ಪೀಕರ್‌ ಯು.ಟಿ.ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳುವರು.

 

Related