Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 23 ನಿಮಿಷದಲ್ಲೇ 70 ಉಗ್ರರ ಉಡೀಸ್
  • Bangalore

23 ನಿಮಿಷದಲ್ಲೇ 70 ಉಗ್ರರ ಉಡೀಸ್

admin May 7, 2025 1 minute read
Spread the love

ಕಾಶ್ಮೀರದಲ್ಲಿ ಭಯೋತ್ಪಾದಕರು ಭೀಕರ ದಾಳಿ ಮಾಡಿರುವುದರಿಂದ 26 ಮಂದಿ ತಮ್ಮ ಜೀವನವನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.

ಇನ್ನು ಈ ದಾಳಿಯಲ್ಲಿ ಪಾಕಿಸ್ತಾನದ ಉಗ್ರರ ಕೈವಾಡ ಇರುವುದು ಬೆಳಕಿಗೆ ಬಂದಿದ್ದು ಅಮಾಯಕರನ್ನ ಬಲಿ ಪಡೆದ ಪಾಕಿಸ್ತಾನದ ವಿರುದ್ಧ ಕೊನೆಗೂ ಭಾರತ ತನ್ನ ಸೇಡನ್ನು ತೀರಿಸಿಕೊಂಡಿದೆ.

ಇಂದು ಭಾರತದ ಪ್ರತೀಕಾರಕ್ಕೆ ಪಾಪಿ ಪಾಕಿಸ್ತಾನ ವಿಲವಿಲ ಒದ್ದಾಡಿದ್ದು ಆಪರೇಷನ್ ಸಿಂಧೂರದ ಮೂಲಕ ಪಾಪಿಗಳ ಕೃತ್ಯಕ್ಕೆ ಕೊನೆಗಾಣಿಸಿದ್ದಾರೆ.

ಹೌದು, ಅಮಾಯಕರ ಬಲಿ ಪಡೆದ ಉಗ್ರರ ವಿರುದ್ಧ ಭಾರತ ಕೊನೆಗೂ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 22ರಂದು ಪಹಲ್ಗಾಮ್​ನ ಬೈಸರನ್​​ನಲ್ಲಿ ಅಮಾಯಕರ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಪೈಶಾಚಿಕ ದಾಳಿ ನಡೆಸಿ, ಬರೋಬ್ಬರಿ 26 ಮಂದಿಯ ಜೀವವನ್ನು ತೆಗೆದಿದ್ದರು. ಈ ಕೃತ್ಯದ ಬೆನ್ನಲ್ಲೇ ಇಡೀ ದೇಶ ಪಾಕಿಸ್ತಾನದ ಮೇಲೆ ಕೆಂಡ ಕಾರಿತ್ತು.

ಒಂದು ಕಡೆ ಪಾಪಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲೇಬೇಕು ಅಂತ ಆಕ್ರೋಶ ವ್ಯಕ್ತವಾಗುತ್ತಿತ್ತು. ಮತ್ತೊಂದು ಕಡೆ ಉಗ್ರರನ್ನು ಉಡಾಯಿಸಬೇಕೆಂದು ಭಾರತ ಸರ್ಕಾರ ಯುದ್ಧಕ್ಕೆ ತಯಾರಿ ಮಾಡಿಕೊಳ್ಳುತ್ತಿತ್ತು. ಅದರಂತೆ ಇಂದು ಮಧ್ಯರಾತ್ರಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ಮಾಡಿದೆ. ಇದನ್ನೂ ಓದಿ:ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಪೀಸ್ ಪೀಸ್!

ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ‘ಆಪರೇಷನ್ ಸಿಂಧೂರ​’ ಆರಂಭಿಸಿವೆ. ಈ ಆಪರೇಷನ್ ಸಿಂಧೂರಗೆ ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕೇವಲ 23 ನಿಮಿಷದಲ್ಲಿ ಪಾಕ್​ನ 9 ನೆಲೆಯನ್ನು ಉಡೀಸ್​ ಮಾಡಿದೆ.

23 ನಿಮಿಷದಲ್ಲೇ 70 ಉಗ್ರರು ಮೃತಪಟ್ಟಿದ್ದಾರೆ. ಭಾರತವು ಪಾಕ್ ಆಕ್ರಮಿತ ಕಾಶ್ಮೀರದ 5 ಸ್ಥಳ ಮತ್ತು ಪಾಕ್​ನ 4 ಸ್ಥಳ ಸೇರಿ ಉಗ್ರರ ನೆಲೆ, ಟ್ರೆನಿಂಗ್ ಕ್ಯಾಂಪ್​ಗಳ ಮೇಲೆ ಏಕಕಾಲದಲ್ಲಿ 9 ಕಡೆಯಲ್ಲಿ ದಾಳಿ ಮಾಡಿ ಹೊಡೆದುರುಳಿಸಿದೆ. ಇದರಲ್ಲಿ‌ ಈ ಮೂಲಕ ಭಾರತ ತನ್ನ ಪ್ರತೀಕಾರವನ್ನು ತೀರಿಸಿಕೊಂಡಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಪೀಸ್ ಪೀಸ್!
Next: ಹಾಡುಹಗಲೇ ಖತರ್ನಾಕ್ ಕಳ್ಳತನ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.