ಸರ್ಕಾರಿ ಶಾಲೆಯಲ್ಲಿ ಬಿಸಿ ಊಟ ಸೇವಿಸಿ 8 ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಬಿಸಿ ಊಟ ಸೇವಿಸಿ 8 ಮಕ್ಕಳು ಅಸ್ವಸ್ಥ

ದೇವನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟವನ್ನು ಕೊಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಈ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ಕೊಡಲಾಗುತ್ತದೆ. ಈ ಬಿಸಿ ಊಟದ ಜೊತೆಗೆ ಕೊಳೆತಿರುವ ಮೊಟ್ಟೆಯನ್ನು ನೀಡಲಾಗಿದ್ದು ಆ ಮೊಟ್ಟೆಗಳನ್ನು ವಿದ್ಯಾರ್ಥಿಗಳು ಸೇವಿಸಿ ಅಸ್ತವೆಸ್ತಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ 8 ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ, ವಸತಿ ನಿಲಯಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ತಕ್ಷಣ ವಸತಿ ನಿಲಯದ ವಾರ್ಡ್​ನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಡಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯಿಂದ ಈ ರೀತಿಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದೆರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವ ಆರೋಪ ಕೇಳಿಬಂದಿದೆ.

Related