ನಿರ್ಮಾಪಕನಿಗೆ ಕೊರೊನಾ ..!

  • In Cinema
  • July 19, 2022
  • 271 Views
ನಿರ್ಮಾಪಕನಿಗೆ ಕೊರೊನಾ ..!

ಚೆನ್ನೈ, ಜು 19 : ಖ್ಯಾತ ಚಲನಚಿತ್ರ ನಿರ್ಮಾಪಕ ಮಣಿರತ್ನಂಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿರತ್ನಂ ಆರೋಗ್ಯ ಸ್ಥಿತಿಯ ಬಗ್ಗೆ ಅವರ ಪತ್ನಿ ಹಾಗೂ ಚಿತ್ರನಟಿ ಸುಹಾಸಿನಿ ಇದುವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸದ್ಯ ಆಸ್ಪತ್ರೆಗೆ ದಾಖಲಾಗಿರುವ ಮಣಿರತ್ನಂ ತಮ್ಮ ಕನಸಿನ ಚಿತ್ರ ಪೊನ್ನಿಯಿನ್ ಸೆಲ್ವನ್ನಲ್ಲಿ ಬ್ಯುಸಿ ಆಗಿದ್ದರು.

ಕಳೆದ ಜುಲೈ 8ರಂದು ಪೊನ್ನಿಯಿನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ನಿರ್ದೇಶಕ ಮಣಿರತ್ನಂ, ಅದೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದರು.

Related