ಕಲಬುರಗಿಯಲ್ಲಿ ಕೊರೊನಾ ಸಂಖ್ಯೆ ಏರಿಕೆ

  • In State
  • March 17, 2020
  • 452 Views
ಕಲಬುರಗಿಯಲ್ಲಿ ಕೊರೊನಾ ಸಂಖ್ಯೆ ಏರಿಕೆ

ಕಲಬುರಗಿ, ಮಾ. 17: ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹಬ್ಬಲಾರಂಭಿಸಿದ್ದು, ಏತನ್ಮಧ್ಯೆ ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ವೈರಸ್ ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿದಂತಾಗಿದೆ.
ಕಲಬುರಗಿಯಲ್ಲಿ 63 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಸೋಂಕು ತಗುಲಿದೆ. ವೃದ್ಧ ಇತ್ತೀಚೆಗಷ್ಟೇ ಸಾವನ್ನಪ್ಪುವ ಮೂಲಕ ದೇಶದಲ್ಲಿ ಮೊದಲ ಕೊರೊನಾ ಸಾವಿನ ಪ್ರಕರಣ ದಾಖಲಾಗಿತ್ತು. ಇದೀಗ ಮೃತ ವೃದ್ಧನಿಗೆ ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

Related