ಬೆಂಗಳೂರು: ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಜಗಜ್ಜಾಹಿರಾಗಿದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರು.ಗೆ ಖರೀದಿಸಿದ ವೆಂಟಿಲೇಟರ್ಗೆ ಕರ್ನಾಟಕ ಸರ್ಕಾರ 18.20 ಲಕ್ಷ ರೂ ಕೊಟ್ಟಿದೆ.
ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯುತ್ತಿದ್ದರೆ, ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೋನಾ ಚಿಕಿತ್ಸೆ ಸಲಕರಣೆಗಳ ಖರೀದಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಬಿಜೆಪಿ ಸರ್ಕಾರ ಕೊರೋನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.