ಏ. 2ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ

ಏ. 2ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ತನ್ನ ಅಧಿಕಾರದ ಗದ್ದುಗೆಯನ್ನು ಮತ್ತೊಮ್ಮೆ ಏರಲು ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಂಡಿದ್ದು, ಕರ್ನಾಟಕ ರಾಜ್ಯದಲ್ಲಿ ಇದೆ ಏಪ್ರಿಲ್ 2ನೇ ತಾರೀಕಿನಿಂದ ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಏಪ್ರಿಲ್ 2 ರಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಯಿಂದ 5 ಕ್ಷೇತ್ರದ ಕಾರ್ಯಕರ್ತರ ಜೊತೆ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.

ಹಾಗೆ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ ಜೊತೆ ಅಮಿತ್‌ ಶಾ  ಸಮಾವೇಶ ನಡೆಸಲಿದ್ದಾರೆ. 5 ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದ ಬಳಿಕ ಅಮಿತ್ ಶಾ ಅವರು, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕ ಬಳ್ಳಾಪುರ ಪ್ರಮುಖರ ಲೋಕಸಭಾ ಕ್ಷೇತ್ರದಲ್ಲಿ ಸಭೆಯನ್ನು ಕೈಗೊಳ್ಳಲಿದ್ದಾರೆ.

 

Related