ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.
ಬಾಳೆಹೊನ್ನೂರಿನಲ್ಲಿ (ಮಂಗಳವಾರ ಮಾ. 11) ರಂದುಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಚುನಾವಣಾ ಪ್ರಕ್ರಿಯೆಗಳನ್ನು ಬಲಪಡಿಸಲು ಕಾನೂನು ಚೌಕಟ್ಟಿನೊಳಗೆ ಸಂವಹನ
ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
