ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ

ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಬೆಂಕಿ ಅವಘಡಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಬೆಂಕಿಯಲ್ಲಿ ಸಜೀವ ದಹನಗಳೆ ಆಗುತ್ತಿದ್ದಾವೆ.

ನಿನ್ನೆ ಭಾನುವಾರ ತಡರಾತ್ರಿ ರಾಮಮೂರ್ತಿ ನಗರದಲ್ಲಿರುವಂತಹ ಬೃಹತ್ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ತಗಳಿದ್ದು, ಕಟ್ಟಡದಲ್ಲಿದ್ದಂತಹ ಪ್ರತಿ ವಸ್ತುಗಳು ಸುಟ್ಟು ಕರಕಲಾಗಿವೆ.

ಹೌದು ನಗರದ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಧಗಧಗನೇ ಹೊತ್ತಿ ಉರಿದಿದೆ. ತಡರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ.

ನಾಲ್ಕು ಅಂತಸ್ತಿನ ಈ ಕಟ್ಟಡದಲ್ಲಿ ಕೆಳ ಹಾಗೂ ಮೊದಲ ಮಹಡಿಯಲ್ಲಿ ಫರ್ನಿಚರ್ಸ್ ಶೋರೂಂ ಇತ್ತು. ಎರಡನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ಇತ್ತು.

ಇನ್ನೂ ಮೂರು ಮತ್ತು ನಾಲ್ಕನೇ ಮಹಡಿಯಲ್ಲಿ ಸಾಫ್ಟ್​​ವೇರ್ ಕಂಪನಿಯೊಂದು ಕಾರ್ಯ ನಿರ್ವಹಿಸುತ್ತಿತ್ತು. ನಾಲ್ಕು ಅಂತಸ್ತಿಗೂ ಬೆಂಕಿ ವ್ಯಾಪಿಸಿದ್ದು, ಕಟ್ಟಡದಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.

ಶಾಟ್​ ಸರ್ಕ್ಯೂಟ್​ನಿಂದ ಬೆಂಕಿ ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಭಾನುವಾರ ಮತ್ತು ದೀಪಾವಳಿ ರಜೆ ಇರೋ ಕಾರಣದಲ್ಲಿ ಕಟ್ಟಡದಲ್ಲಿ ಜನರು ಇರಲಿಲ್ಲ ಎನ್ನಲಾಗಿದೆ. ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಅಗ್ನಿಶಾಮಕದಳ ರಕ್ಷಿಸಿದ್ದಾರೆ.

ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

 

 

Related