Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯ ಸರ್ಕಾರದಿಂದ ಮುಸ್ಲಿಮರಿಗೆ ಭರ್ಜರಿ ಕೊಡುಗೆ?!
  • Bangalore
  • Front news
  • Politics
  • State

ರಾಜ್ಯ ಸರ್ಕಾರದಿಂದ ಮುಸ್ಲಿಮರಿಗೆ ಭರ್ಜರಿ ಕೊಡುಗೆ?!

admin March 13, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಅತಿಯಾಗಿ ಒಲೈಕೆ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿರುವ ಸುಳಿವೊಂದು ಹೊರಬಿದ್ದಿದೆ.

ಹೌದು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಮೀಸಲಾತಿಯನ್ನು 4 ರಿಂದ ಇದೀಗ 10ಕ್ಕೆ ಹೆಚ್ಚಿಸುವಂತೆ ಸಚಿವ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಮುಸ್ಲಿಮರ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್​ಗೆ ಸಂಘಟನೆಗಳು ಮನವಿ ಮಾಡಿದ್ದವು. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್‌ನಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Toys Park ನಿರ್ಮಿಸಲು ಮನವಿ

ಮುಸ್ಲಿಮರಿಗೆ 2 ಬಿ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಬಗ್ಗೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.

ಇತ್ತೀಚೆಗೆ ಮಂಡಿಸಿದ್ದ 2025-26ನೇ ಸಾಲಿನ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ಘೋಷಣೆಯ ಬೆನ್ನಲ್ಲೇ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿರುವಂತಿದೆ.

 

About the Author

admin

Administrator

Visit Website View All Posts

Spread the love

Post navigation

Previous: Toys Park ನಿರ್ಮಿಸಲು ಮನವಿ
Next: ಗೊಂದಲಕ್ಕೀಡಾದ ಬಿಜೆಪಿ ಅಧ್ಯಕ್ಷರ ಸನ್ಮಾನ ಕಾರ್ಯಕ್ರಮ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.