ಮೈಸೂರು ರಾಜರ ಅದ್ದೂರಿ ರೋಡ್ ಶೋ

ಮೈಸೂರು ರಾಜರ ಅದ್ದೂರಿ ರೋಡ್ ಶೋ

ಮಡಿಕೇರಿ: ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ಎಲ್ಲ ಪಕ್ಷದ ಅಭ್ಯರ್ಥಿಗಳು ಬರದಿಂದ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಇಂದು ಮಡಿಕೇರಿಯಲ್ಲಿ ಭರ್ಜರಿ ಬೃಹತ್ ರೋಡ್ ಶೋ ಮಾಡುವ ಮೂಲಕ ಮತ ಪ್ರಚಾರ ಮಾಡಿದ್ದಾರೆ.

ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಇನ್ನು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತ ಪರಿಕಲ್ಪನೆಯು ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಭಾರತ ಕಲ್ಪನೆಯು ಜಾಗತಿಕವಾಗಿ ಖ್ಯಾತಿ ಪಡೆದಿದೆ ಎಂದರು.

ಸುಸ್ಥಿರ ಆರ್ಥಿಕತೆ ನಿರ್ಮಾಣ, ಡಿಜಿಟಲ್ ಇಂಡಿಯಾ, ರಕ್ಷಣಾ ವಲಯದಲ್ಲಿ ಸ್ವಾವಲಂಬನೆ, ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಕೆ, ಸ್ವದೇಶಿ ಉತ್ಪನ್ನಗಳ ಮಾರುಕಟ್ಟೆ, ಮೇಕ್ ಇನ್ ಇಂಡಿಯಾ ಇತ್ಯಾದಿಗಳ ಮೂಲಕ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಮತದಾರರು ‘ಕಮಲ’ ಬಟನ್ ಒತ್ತಿ, ಮೋದಿಯನ್ನು ಪುನಃ ಆಯ್ಕೆ ಮಾಡಿರಿ ಎಂದು ಮನವಿ ಮಾಡಿದರು.

 

Related