ಆಶಾ ಕಾರ್ಯಕರ್ತೆಯರಿಗೆ ಸಾಲ

ಆಶಾ ಕಾರ್ಯಕರ್ತೆಯರಿಗೆ ಸಾಲ

ದಾವಣಗೆರೆ: ಕೊರೋನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ರೂ.ನಂತೆ 12.7 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.ಶೀಘ್ರದಲ್ಲಿ ಆಶಾ ಕಾರ್ಯಕರ್ತೆಯರಿಗೂ  ಸಾಲ ಕೊಡಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.

ಕೋವಿಡ್ -19 ವಿರುದ್ಧ ಹೋರಾಡಿದ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ತಲಾ 3 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಹ ಚರ್ಚಿಸಲಾಗಿದೆ ಎಂದು ಕೊರೋನಾ ಸಂಕಷ್ಟದ ಸಮಯದಲ್ಲಿ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಸಹಕಾರ ಇಲಾಖೆಯಿಂದ 53 ಕೋಟಿ ರೂ.ಗಳನ್ನು ಸಂಗ್ರಹಿಸಿ ನೀಡಿದ್ದೇವೆ. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಕೊಡುವ ವಿಚಾರದಲ್ಲೂ ಮುಖ್ಯಮಂತ್ರಿಗಳಿಗೆ ಸಹಕಾರ ನೀಡಿದ್ದೇವೆ ಎಂದರು.

 

Related