Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಲಿತ ವಿರೋಧಿ ʼಕೈʼ ಸರಕಾರಕ್ಕೆ ಪಾಠ ಕಲಿಸಲು ಪ್ರತಿಭಟನೆ- ವಿಜಯೇಂದ್ರ
  • Bangalore
  • Politics
  • State

ದಲಿತ ವಿರೋಧಿ ʼಕೈʼ ಸರಕಾರಕ್ಕೆ ಪಾಠ ಕಲಿಸಲು ಪ್ರತಿಭಟನೆ- ವಿಜಯೇಂದ್ರ

admin March 5, 2025 1 minute read
Spread the love

ಬೆಂಗಳೂರು: ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರುಪಯೋಗ ಪಡಿಸಿದ ಭ್ರಷ್ಟ, ದುಷ್ಟ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ನೀಡಲು ನಾವು ಇಲ್ಲಿ ಸೇರಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ನಗರದ ಫ್ರೀಡಂ ಪಾರ್ಕ್‍ನಲ್ಲಿ ಇಂದು (ಬುಧವಾರ ಮಾ. 05) ರಂದು ನಡೆದ ‘ಎಸ್‍ಸಿಪಿ-ಟಿಎಸ್‍ಪಿ ಹಣ ದುರ್ಬಳಕೆ’ ಮಾಡಿಕೊಂಡ ದಲಿತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ದುಷ್ಟ, ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ. ನಮ್ಮ ಹೋರಾಟ ನಿರಂತರವಾಗಿರಲು ಕೈಜೋಡಿಸಿ ಎಂದು ಕರೆ ನೀಡಿದರು. ನಾಳೆ ಬೆಳಿಗ್ಗೆ ಇದೇ ಜಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ. ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವೇ?: ವಿಜಯೇಂದ್ರ

ಬಿಜೆಪಿ ಸರಕಾರಗಳು ಪರಿಶಿಷ್ಟ ಜಾತಿ, ಪಂಗಡದ ಹಣ ದುರ್ಬಳಕೆ ಮಾಡಿಲ್ಲ; ಮಾಡುವುದೂ ಇಲ್ಲ ಎಂದು ಹೇಳಿದರು. ಈ ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತ ಬಂದಿದೆ ಎಂದು ಅವರು ನುಡಿದರು. ಬಿಜೆಪಿ ಯಾವತ್ತೂ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಪರವಾಗಿದೆ ಎಂದು ವಿವರಿಸಿದರು. ಸಚಿವರೊಬ್ಬರು ಬಿಜೆಪಿ ಆಡಳಿತದ ಇತರ ರಾಜ್ಯಗಳ ಸರಕಾರಗಳ ಕುರಿತು ತಪ್ಪು ಮಾಹಿತಿ ನೀಡಿದ್ದಾಗಿ ಆಕ್ಷೇಪಿಸಿದರು.

ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಹೇಳಿ ಅಧಿಕಾರಕ್ಕೆ ಬಂದಿದೆ ಎಂದು ವಿವರಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವೇ?: ವಿಜಯೇಂದ್ರ
Next: ಕೆ ಎಸ್ ಆರ್ ಟಿ ಸಿ ಘಟಕಕ್ಕೆ ಕೇರಳ ಸಾರಿಗೆ ಸಂಸ್ಥೆಯ ನಿರ್ದೇಶಕರ ಭೇಟಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.