ಭೀಕರ ಅಪಘಾತ; ಸ್ಥಳದಲ್ಲೇ 4 ಜನರ ಸಾವು

ಭೀಕರ ಅಪಘಾತ; ಸ್ಥಳದಲ್ಲೇ 4 ಜನರ ಸಾವು

ಜಮಖಂಡಿ: ಶಾಲಾ ಕಾರ್ಯಕ್ರಮ ಒಂದನ್ನು ಮುಗಿಸಿಕೊಂಡು ಬರುತ್ತಿರುವ ಶಾಲಾ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಮಖಂಡಿಯಲ್ಲಿ ನಡೆದಿದೆ.

ಹೌದು, ಶಾಲಾ ವಾಹನ ಮತ್ತು ಟ್ರ್ಯಾಕ್ಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ  ತಾಲೂಕಿನ ಆಲಗೂರ ಗ್ರಾಮದ ಬೆಳಗಾವಿ ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ವೇತಾ ಪಾಟೀಲ (16), ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ವಿದ್ಯಾರ್ಥಿಗಳು.

ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ತಡರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.

ಮೂವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ತ್ರೀವೃ ನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ. ಒಟ್ಟು ಹದಿಮೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮದ ಕಡೆ ಹೊರಟಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿಯಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Related