ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಕೆಎಎಸ್ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಮೈಸೂರು : ಶನಿವಾರ ಬೆಳಿಗ್ಗೆ ಬೆಂಗಳೂರಿನ ಬಿಡಿಎ ಭೂಸ್ವಾಧೀನಾಧಿಕಾರಿ ಬಿ.ಸುಧಾ ಅವರ ಮೈಸೂರಿನಲ್ಲಿರುವ ಸಂಬAಧಿ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ದಾಳಿ ವೇಳೆ ಸುಧಾ ಮತ್ತು ಬೇನಾಮಿ ಹೆಸರಿನಲ್ಲಿರುವ ಅಪಾರ ಪ್ರಮಾಣದ ಆಸ್ತಿ ಪತ್ರ ಹಾಗೂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನ ಬೆಮೆಲ್ ಲೇಔಟ್ ನಲ್ಲಿ ಸುಧಾ ಅವರ ಸಂಬಂಧಿ ಮನೆ ಇದೆ. ಎಸಿಬಿಯ 9 ಜನರ ಅಧಿಕಾರಿಗಳ ತಂಡ ಶನಿವಾರ ಬೆಳಿಗ್ಗೆ ಆ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಪ್ರಿಂಟರ್, ಲ್ಯಾಪ್ ಟಾಪ್, ಆಸ್ತಿ ಪತ್ರಗಳು, ಚಿನ್ನಾಭರಣ ಸೇರಿದಂತೆ ಅಕ್ರಮ ಆಸ್ತಿಗೆ ಸಂಬAಧಿಸಿದAತೆ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಆದರೂ ವಶಪಡಿಸಿಕೊಂಡ ದಾಖಲಾತಿಗಳನ್ನು ಪರಿಶೀಲನೆ ನಡೆಸಲು ಎಸಿಬಿ ಅಧಿಕಾರಿಗಳು ಬೆಂಗಳೂರಿಗೆ ಕೊಂಡೊಯ್ದಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿಯ ಭವ್ಯ ಬಂಗಲೆಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ಹಗೂ ಹತ್ತು ಲಕ್ಷ ನಗದು ದೊರೆತಿದೆ.

ಉಡುಪಿ ಜಿಲ್ಲೆಯ ಚಾಂತಾರಿನಲ್ಲಿ ಇರುವ ಸುಧಾ ಅವರ ಗಂಡನ ಮನೆ ಮೇಲೂ ದಾಳಿ ನಡೆದಿದ್ದು, ಹೆಬ್ರಿ ತೆಂಕಬೆಟ್ಟು ಸೇರಿದಂತೆ ರಾಜ್ಯದ 6 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದೆ

Related