ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ

ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ

ಕೋಲಾರ: ಪೋಕ್ಸೊ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ನಡೆಸುವ ವಿಶೇಷ ಶೀಘ್ರಗತಿ ನ್ಯಾಯಾಲಯವು ಕಾರ್ಯರೂಪಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಘುನಾಥ್ ಎಂ.ಎಲ್. ತಿಳಿಸಿದರು.
ಕೋಲಾರ ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಪೋಕ್ಸೊ ನ್ಯಾಯಾಲಯ ಹಾಗೂ ಮದ್ಯಸ್ಥಿಕೆ ಕೇಂದ್ರದ ಉದ್ಘಾಟನೆ ಮಾಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ 126 ಪೋಕ್ಸೊ ಪ್ರಕರಣಗಳು ಬಾಕಿ ಇದೆ. ಪ್ರಕರಣ ದಾಖಲಾದ ಒಂದು ವರ್ಷದೊಳಗಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕ್ರೀಮಿನಲ್ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗುವಂತಹ ಪ್ರಕರಣಗಳನ್ನು ಮದ್ಯಸ್ಥಿಕೆ ಕೇಂದ್ರದಲ್ಲಿ ರಾಜಿ ಮಾಡಿಸಲಾಗುವುದು. ಸುಮಾರು 48 ಜನ ವಕೀಲರು ಈ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 60 ದಿನ ಕಾಲಮಿತಿ ಒಳಗಾಗಿ ಮದ್ಯಸ್ಥಿಕೆ ಕೇಂದ್ರದಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು. ವಕೀಲರು ಕಕ್ಷೀದಾರರು ಈ ಮದ್ಯಸ್ಥಿಕೆ ಕೇಂದ್ರದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

Related