ಹೊಸ ಜೀವನಕ್ಕೆ ಕಾಲಿಟ್ಟ ನಟ ವಿನಾಯಕ್ ಜೋಶಿ

ಹೊಸ ಜೀವನಕ್ಕೆ ಕಾಲಿಟ್ಟ ನಟ ವಿನಾಯಕ್ ಜೋಶಿ

ಬೆಂಗಳೂರು : ಸ್ಯಾಂಡಲ್ ವುಡ್ ನಟ ವಿನಾಯಕ್ ಜೋಶಿ ಅವರು ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ವರ್ಷಾ ಬೆಳವಾಡಿ ಅವರು ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿ ಖ್ಯಾತಿ ಪಡೆದಿದ್ದಾರೆ. ಪ್ರಸ್ತುತ ವರ್ಷಾ ಅವರು ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಂದು ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನಡೆಯಿತು. 15 ರಿಂದ 55 ವರ್ಷದೊಳಗಿನವರಿಗಷ್ಟೇ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶವಿರುವುದರಿಂದ ಮದುವೆಯಲ್ಲಿ ಸ್ನೇಹಿತರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು.

Related