ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನಟ ವಿಶಾಲ್ ಅವರು ನಟಿ ಸಾಯಿ ಧನಿಷ್ಕಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ಲಾಗಿದ್ದು, ನಟ ವಿಶಾಲ್ ಅವರಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ. ಇದನ್ನೂ ಓದಿ: ತಮ್ಮ ಮದುವೆ ಬಗ್ಗೆ ಅನುಶ್ರೀ ಹೇಳಿದ್ದೇನು?
ಹೌದು, ನಟ ವಿಶಾಲ್ ಕುಟುಂಬದವ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ವಿಶಾಲ್ ಅವರು ತಾವು ನಟಿ ಸಾಯಿ ಧನಿಷ್ಕಾ ಜೊತೆ ಪ್ರೀತಿಯಲ್ಲಿದ್ದು ಶೀಘ್ರವೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದರು. ಇದೀಗ ವಿಶಾಲ್ ಹಾಗೂ ಸಾಯಿ ಧನಿಷ್ಕಾ ಅವರ ನಿಶ್ಚಿತಾರ್ಥವು ವಿಶಾಲ್ ನಿವಾಸದಲ್ಲಿಯೇ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ ಎಂದು ತಿಳಿದು ಬಂದಿದೆ.
