ಪೊಲೀಸರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಟಿ ರಮ್ಯಾ

ಪೊಲೀಸರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಟಿ ರಮ್ಯಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ರವರನ್ನ ಬಂಧಿಸಿರುವುದು ಇಡೀ ಕನ್ನಡ ಚಿತ್ರರಂಗದಲ್ಲಿ ಬಾರಿ ಸಂಚಲನ ನುಡಿಸಿದೆ.

ಚಿತ್ರರಂಗ ಸೇರಿದಂತೆ ಇನ್ನಿತರ ಹಲವಾರು ಸಾರ್ವಜನಿಕರು ಕೂಡ ದರ್ಶನ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದರಂತೆ ನಟಿ ರಮ್ಯಾ ಕೂಡ ಅವರು ನಟ ದರ್ಶನ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್ ಈಶ್ವರ್

ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿರುವ ರಮ್ಯಾ, ‘ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು’ ಎಂದಿದ್ದಾರೆ.

ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ‘ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ’ ಎಂದಿದ್ದಾರೆ.

 

Related