ನಶೆರಾಣಿಗೆ ಆಸ್ಪತ್ರೆಗೆ ದಾಖಲು

ನಶೆರಾಣಿಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು : ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ಅವರಿಗೆ ನಿನ್ನೆ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಜೈಲಿನ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಯಿತು.

ಹೆಚ್ಚಿನ ಚಿಕಿತ್ಸೆಯ ಹಿನ್ನೆಲೆಯಲ್ಲಿ ತಡರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಗಿಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ನಡುವೆ ಜೈಲು ಪಾಲಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಜನವರಿ ಮೊದಲವಾರಕ್ಕೆ ಮುಂದೂಡಿದೆ.

ಆ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ರಾಗಿಣಿ ಹೊಸ ವರ್ಷ ಆಚರಿಸುವುದು ಅನಿವಾರ್ಯ ಆಗಿದ್ದ ಬೆನ್ನಲ್ಲೇ ಅನಾರೋಗ್ಯ ಕ್ಕೆ ತುತ್ತಾಗಿದರು.

Related