ಚುನಾವಣೆ ಅಂದ ಮೇಲೆ ತಂತ್ರ, ಕುತಂತ್ರಗಳು ಇರುತ್ತೆ: ಪ್ರಹ್ಲಾದ್ ಜೋಶಿ

ಚುನಾವಣೆ ಅಂದ ಮೇಲೆ ತಂತ್ರ, ಕುತಂತ್ರಗಳು ಇರುತ್ತೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಹ್ಲಾದ್ ಜೋಶಿ ಅವರು ಇಂದು (ಏಪ್ರಿಲ್ 15 ಸೋಮವಾರ) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಧಾರವಾಡದಲ್ಲಿರುವ ಡಿಸಿ ಕಚೇರಿಗೆ ತೆರಳಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ತೆರೆದ ವಾಹನದಲ್ಲಿ ಡೊಳ್ಳು ಕುಣಿತದ ಜೊತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರ ಜೊತೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರಹ್ಲಾದ್​ ಜೋಶಿ ಅವರು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್​ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ. ​​

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ರಾಘವೇಂದ್ರ ಮಠ, ಸಿದ್ದಾರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಧಾರವಾಡದ ಶಿವಾಜಿ ಸರ್ಕಲ್​​ನಿಂದ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮುಖಾಂತರ ಸಾಗಿ, ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ವಿಶ್ವಾಸ ಇದೆ, ಜ‌ನರು ಆಶೀರ್ವಾದ ಮಾಡುತ್ತಾರೆ. ಚುನಾವಣೆ ಅಂದ ಮೇಲೆ ತಂತ್ರ, ಕುತಂತ್ರಗಳು ಇರುತ್ತೆ. ಒಂದೊಂದು ಚುನಾವಣೆಯಲ್ಲೂ ಒಂದೊಂದು ತಂತ್ರ. ಆದರೆ, ಜನರು ಆಶೀರ್ವಾದ ಮಾಡುತ್ತಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಗ್ಯಾರಂಟಿ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.

Related