ಕೃಷಿ ಮಸೂದೆ : ರೈತರ ಪ್ರಾಣಕ್ಕೆ ಕುತ್ತು

ಕೃಷಿ ಮಸೂದೆ : ರೈತರ ಪ್ರಾಣಕ್ಕೆ ಕುತ್ತು

ಸಿಂದಗಿ : ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಖಂಡ ಕರ್ನಾಟಕ ರೃತ ಸಂಘ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಮತ್ತು ಪ್ರಗತಿಪರ, ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ರೈತ ವಿರೋಧಿ ನಿಲುವು ಖಂಡಿಸಿ, ಕರ್ನಾಟಕ ಬಂದ್ ಬೆಂಬಲಿಸಿ ಕೆಲಕಾಲ ರಸ್ತೆ ತಡೆ ನಡೆಸಿ, ತಹಶೀಲ್ದಾರ ಸಂಜೀವಕುಮಾರ ದಾಸರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಸಿದರು.

ಈ ವೇಳೆ ರೈತ ಮುಖಂಡ ಸಿದ್ರಾಮಪ್ಪ ರಂಜಣಗಿ, ಸಂಗಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿ ಅನಿತಾ ಡಿಸೋಜಾ, ಬಸನಗೌಡ ಧರ್ಮಗೊಂಡ ಮತ್ತಿತರರು ಮಾತನಾಡಿ, ಕೆಳ ಹಾಗೂ ಮೇಲಿನ ಸರ್ಕಾರಗಳೆರೆಡೂ ಕೃಷಿ ಮಸೂದೆಯನ್ನು ಜಾರಿಗೆ ತಂದು ರೈತರ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರೈತರ ಜೀವಹಾನಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

Related