ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ 2025ಕ್ಕೆ ದಿನಗಡನೆ ಪ್ರಾರಂಭವಾಗಿದ್ದು, ಈ ಬಾರಿ ವಿಶೇಷವೆಂದರೆ 11 ದಿನಗಳ ಕಾಲ ಮೈಸೂರು ದಸರಾ ನೆರವೇರಲಿದೆ. ಅಲ್ಲದೆ ಈ ಬಾರಿ ಮೈಸೂರು ದಸರಾದಲ್ಲಿ ಇದೆ ಮೊದಲ ಬಾರಿಗೆ ರಾಜ್ಯ ಸರ್ಕಾರ ಏರ್ಶೋ ನಡೆಸಲು ತೀರ್ಮಾನಿಸಿದೆ.
ಇನ್ನು ಮೈಸೂರು ದಸರಾದಲ್ಲಿ ಏರ್ಶೋ ನಡೆಸಲು ಅನುಮತಿಸಿರುವ ರಕ್ಷಣಾ ಸಚಿವ ರಾಜನಾಥ್ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರು ದಸರಾದಲ್ಲಿ ವಾಯುಪಡೆಯಿಂದ ಏರ್ಶೋ ನಡೆಯಬೇಕೆಂಬುದು ಬಹುದಿನಗಳ ಕನಸಾಗಿತ್ತು. ಹಲವಾರು ಮುಖ್ಯಮಂತ್ರಿಗಳು ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಆದರೆ ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ವೈಯಕ್ತಿಕ ಆಸಕ್ತಿ ತೋರಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ರನ್ನು 3-4 ಬಾರಿ ಭೇಟಿಮಾಡಿ, ಒತ್ತಡ ಹಾಕಿದ್ದರು. ಕಳೆದ ವರ್ಷವೇ ಏರ್ಶೋಗೆ ಅನುಮತಿ ದೊರೆಯುವ ನಿರೀಕ್ಷೆಯಿತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಈ ಬಾರಿ ರಕ್ಷಣಾ ಸಚಿವ ರಾಜನಾಥ್ಸಿಂಗ್ ಏರ್ಶೋಗೆ ಅನುಮತಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಪರವಾಗಿ ರಾಜ್ನಾಥ್ ಅವರನ್ನು ಅಭಿನಂದಿಸಿದ್ದಾರೆ. ಇದನ್ನೂ ಓದಿ: ನಿತಿನ್ ಗಡ್ಕರಿ ಭೇಟಿಯಾದ ಹೆಚ್.ಡಿ.ಕೆ
