ʼಕೈʼ ತೊರೆದು ʼಕಮಲʼ ಮುಡಿದ ಅಖಂಡ ಶ್ರೀನಿವಾಸ ಮೂರ್ತಿ

ʼಕೈʼ ತೊರೆದು ʼಕಮಲʼ ಮುಡಿದ ಅಖಂಡ ಶ್ರೀನಿವಾಸ ಮೂರ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ ಮತ್ತು ಆಪರೇಷನ್ ಹಸ್ತಗಳು ಜೋರಾಗಿ ನಡೆಯುತ್ತಿದ್ದು ಇಂದು ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಹೌದು, ಕಾಂಗ್ರೆಸ್‌ನಿಂದ ವಿಧಾನಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧ ಅಸಮಾಧಾನ ಗೊಂಡಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿ ಸೇರ್ಪಡೆಗೊಂಡರು. ನಗರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಿಜೆಪಿ ಸೇರಿದರು.

ಪುಲಿಕೇಶಿನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜತೆ ಅಖಂಡ ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಧ್ವಜ ಕೊಟ್ಟು, ಪಕ್ಷದ ಶಾಲು ಹಾಕಿ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು.

Related