ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಹಾಗೂ ಗೋವಾ ರಾಜ್ಯಕ್ಕೆ ಅನ್ಯಾಯವೆಸಗುತಿದೆ ಹಾಗಾಗಿ ಕರ್ನಾಟಕ ರಾಜ್ಯದ ಸಂಸದರು ಹಾಗೂ ಕೇಂದ್ರ ಸಚಿವರು ರಾಜ್ಯದ ಯೋಜನೆಗಳ ಬಗ್ಗೆ ಗಮನಹರಿಸಿ, ಆಗಬೇಕಾಗಿರುವ ಕಾಮಗಾರಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಿದರೆ ರಾಜ್ಯಕ್ಕೆ ಒಳಿತಾಗುತ್ತದೆ ಎಂದು ಡಿಕೆ ಸುರೇಶ್ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಹಾಗೂ ಗೋವಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಇದಕ್ಕಾಗಿ ಸಂಸದರು ಕೇಂದ್ರ ಸಚಿವರು ಕಿವಿ ಕೊಡಬೇಕೆಂದು ಹೇಳಿದರು. ಇದನ್ನೂ ಓದಿ: ʼಕೈʼ ಸರ್ಕಾರವನ್ನು ವಿಭಿನ್ನವಾಗಿ ಟೀಕಿಸಿದ ನಿಖಿಲ್ ಕುಮಾರಸ್ವಾಮಿ..!
ಅಲ್ಲದೆ ಕೇಂದ್ರದಲ್ಲಿ ಬಿಜೆಪಿ 3 ಬಾರಿ ಅಧಿಕಾರಕ್ಕೆ ಬರುವಲ್ಲಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಬಹಳ ವರ್ಷಗಳಿಂದ ಇಲ್ಲಸಲ್ಲದ ಕ್ಯಾತೆ ತೆಗೆದುಕೊಂಡು ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆಗೆ ತೊಂದರೆ ನೀಡಲಾಗುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಗೋವಾ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕಕ್ಕೆಅನ್ಯಾಯ ಮಾಡುತ್ತಿರುವುದು ಎದ್ದು ಕಾಣುತ್ತಿದೆ.
ಹೀಗಾಗಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಜಲಶಕ್ತಿ ಸಚಿವರು ಆದಷ್ಟು ಬೇಗ ಈ ಕುಡಿಯುವ ನೀರಿನ ವಿಚಾರವಾಗಿ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸಲು ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ತಿಳಿಸಿದರು.
