ಯಲಹಂಕದಲ್ಲಿ ಮೈತ್ರಿ ಸಂಘಟನೆ ಶಕ್ತಿಯುತವಾಗಿದೆ: ಸುಧಾಕರ್‌

ಯಲಹಂಕದಲ್ಲಿ ಮೈತ್ರಿ ಸಂಘಟನೆ ಶಕ್ತಿಯುತವಾಗಿದೆ: ಸುಧಾಕರ್‌

ಯಲಹಂಕ: ಬಿಜೆಪಿ ಮತ್ತು ಜೆಡಿಎಸ್ ಕೇಂದ್ರದಲ್ಲಿ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವಂತಹ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬೃಹತ್ ರ್ಯಾಲಿ ಮುಖಾಂತರ ಮತಯಾಚನೆ ಮಾಡುವ ಸಂದರ್ಭದಲ್ಲಿ ಮಾತನಾಡಿದ ಅವರು, ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್‌.ಆರ್.ವಿಶ್ವನಾಥ್‌ ಅವರೊಂದಿಗೆ ಸಭೆ ನಡೆಸಿದ್ದೇನೆ. ಇಲ್ಲಿ ಕಾಂಗ್ರೆಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಸ್ಥಿತಿ ಇದೆ. ಶೇ.80 ರಷ್ಟು ಮತಗಳು ಬಿಜೆಪಿಗೆ ದೊರೆಯಲಿದೆ. ಆದರೆ ಕಾಂಗ್ರೆಸ್‌ಗೆ ಶೇ.20ರಷ್ಟೂ ಮತಗಳು ದೊರೆಯುವುದು ಅನುಮಾನ. ಇದಕ್ಕೆ ಶಾಸಕರ ಅಭಿವೃದ್ಧಿ ಕಾರ್ಯಗಳೇ ಕಾರಣ ಎಂದರು.

ಯಲಹಂಕದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸಂಘಟನೆ ಶಕ್ತಿಯುತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಮಾಗಮದಿಂದ ಇಲ್ಲಿ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್‌ ಸರ್ಕಾರ ಬೆರಳೆಣಿಕೆಯ ನಿರುದ್ಯೋಗಿ ಯುವಜನರಿಗೆ ಷರತ್ತುಗಳನ್ನು ಹಾಕಿ ಹಣ ನೀಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಯುವಜನರಿಗೆ ಉದ್ಯೋಗಾವಕಾಶ ನೀಡಿ ಬದುಕು ಕಟ್ಟಿಕೊಟ್ಟಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆಯಡಿ ಎಲ್ಲ‌ ನಿರುದ್ಯೋಗಿಗಳಿಗೆ ಹಣ ನೀಡುವುದಾಗಿ ತಿಳಿಸಿತ್ತು. ಆದರೆ ನಂತರ ಬಹಳ ತಡವಾಗಿ ಯೋಜನೆ ಜಾರಿ ಮಾಡಿ ಅನೇಕ ಷರತ್ತುಗಳನ್ನು ಹಾಕಿ ಎಲ್ಲ ಯುವಜನರಿಗೆ ಅದರ ಪ್ರಯೋಜನ ಸಿಗದಂತೆ ಮಾಡಿದೆ ಎಂದರು.

 

Related