Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದವರು ಅಂಬೇಡ್ಕರ್: ಮಹದೇವಪ್ಪ
  • Bangalore
  • Front news
  • Politics
  • State

ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದವರು ಅಂಬೇಡ್ಕರ್: ಮಹದೇವಪ್ಪ

admin June 18, 2025 1 minute read
Spread the love

ಬೆಂಗಳೂರು: ದೇಶದಲ್ಲಿರುವ ಪ್ರತಿಯೊಬ್ಬ ಹೆಣ್ಣು ಮಕ್ಕಳ ಹಕ್ಕುಗಳಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಇತಿಹಾಸದಲ್ಲಿ ಮಹಿಳಾ ಹಕ್ಕುಗಳಿಗಾಗಿ ಹಿಂದೂ ಕೋಡ್ ಬಿಲ್ ಮೂಲಕ ಶಾಸನ ಬದ್ಧವಾಗಿ ಕಾಯ್ದೆಗಳನ್ನು ಪ್ರಸ್ತಾಪ ಮಾಡಿದ ಮೊದಲ ಭಾರತೀಯರಾಗಿದ್ದು ಅಂತಹ ಮಹಾನ್ ಮಹಿಳಾ ಚಿಂತಕರನ್ನು ಈ ದೇಶದ ಎಲ್ಲ ಮಹಿಳೆಯರೂ ನೆನಪಿಡಬೇಕೆಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ FICCI flo ಇವರ ಸಹಯೋಗದಲ್ಲಿ ಜರುಗಿದ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಸಮುದಾಯದ ಮಕ್ಕಳ ಶೈಕ್ಷಣಿಕ ಏಳಿಗೆಗಾಗಿ ಶ್ರಮಿಸುತ್ತಿರುವ ಕ್ರೈಸ್ ವಸತಿ ಶಿಕ್ಷಣ ಸಂಸ್ಥೆಯು ಇದೀಗ ತನ್ನ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಆರೋಗ್ಯ ಶಿಬಿರ ಏರ್ಪಡಿಸಿ ಅವರಿಗೆ ಉಚಿತ ಆರೋಗ್ಯ ತಪಾಸಣೆ ಮಾಡುವ ಮತ್ತು ಮಹಿಳೆಯರ ಮುಟ್ಟಿನ ಕಪ್ ಗಳನ್ನು ವಿತರಿಸುವ ಅರ್ಥಪೂರ್ಣ ಕೆಲಸ ಮಾಡುತ್ತಿದ್ದು ಅವರನ್ನು ಈ ವೇಳೆ ಮನದುಂಬಿ ಅಭಿನಂದಿಸುತ್ತೇನೆ.

ಮನುಷ್ಯನಿಗೆ ಎಲ್ಲ ಸಂಗತಿಗಳಿಗಿಂತಲೂ ಆರೋಗ್ಯವೇ ಮಿಗಿಲಾದ ವಿಷಯವಾಗಿದ್ದು ಈ ದಿಸೆಯಲ್ಲಿ ನಾವೆಲ್ಲರೂ ಜಾಗರೂಕತೆಯಿಂದ ಇರಬೇಕು.  ಆರೋಗ್ಯದಿಂದ ಇದ್ದರೆ ನಾವು ಎಲ್ಲಾ ಸಾಮಾಜಿಕ ಸದ್ಗುಣಗಳನ್ನು ಸಹಿಸಬಲ್ಲೆವು. ಹೀಗಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ ಎಂಬ ಜೇಮ್ಸ್ ಫ್ರಾಂಕ್ಲಿನ್ ಅವರ ಮಾತನ್ನು ಸಚಿವರು ಈ ವೇಳೆ ನೆನೆದರು.  ಇದನ್ನೂ ಓದಿ: ಪ್ರತಿಯೊಬ್ಬ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡುವುದು ನಮ್ಮೆಲ್ಲರ ಜವಾಬ್ದಾರಿ: ಎಂ ಸತೀಶ್ ರೆಡ್ಡಿ

ಓರ್ವ ವೈದ್ಯನಾಗಿ ಆರೋಗ್ಯದ ವಿಷಯದಲ್ಲಿ ನಾನೂ ಕೂಡಾ ಹೆಚ್ಚಿನ ಕಾಳಜಿ ವಹಿಸುತ್ತೇನೆ ಮತ್ತು ಅದನ್ನೇ ಎಲ್ಲರಿಗೂ ಸಲಹೆ ನೀಡಲು ಬಯಸುತ್ತೇನೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ರಾಜ್ಯದ ಇತರೆ ಶಾಲೆಗಳಿಗಿಂತ ಶೈಕ್ಷಣಿಕವಾಗಿ ಮುಂದಿದ್ದು ಅಧಿಕಾರಿಗಳ ಶ್ರಮದಿಂದ ಇದು ಸಾಧ್ಯವಾಗಿದೆ ಎಂದು ಸಚಿವರು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಪ್ರತಿಯೊಬ್ಬ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡುವುದು ನಮ್ಮೆಲ್ಲರ ಜವಾಬ್ದಾರಿ: ಎಂ ಸತೀಶ್ ರೆಡ್ಡಿ
Next: 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿಎಂ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.