ನಾಮಪತ್ರ ಸಲ್ಲಿಸಿದ ಅಮಿತ್ ಶಾ

ನಾಮಪತ್ರ ಸಲ್ಲಿಸಿದ ಅಮಿತ್ ಶಾ

ಗಾಂಧಿನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಇಂದು ಮೊದಲನೆಯ ಹಂತದ ಮತದಾನ ಪ್ರಾರಂಭವಾಗಿದ್ದು 21 ರಾಜ್ಯಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಇನ್ನು ಎರಡನೇ ಹಂತದ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಭ್ಯರ್ಥಿಯಾಗಿ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ 12.39ಕ್ಕೆ ಗಾಂಧಿನಗರ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಅಮಿತ್ ಶಾ ನಾಮಪತ್ರ ಸಲ್ಲಿಸಿದರು. ಅಮಿತ್ ಶಾ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇದ್ದರು. ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಅವರು ಕಳೆದ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

Related