ಅಮಿತ್ ಶಾ ಒಬ್ಬ ರೌಡಿ, ಅವರ ವಿರುದ್ಧ ಕ್ರಿಮಿನಲ್ ಕೇಸ್ ಗಳಿವೆ: ಯತೀಂದ್ರ!?

ಅಮಿತ್ ಶಾ ಒಬ್ಬ ರೌಡಿ, ಅವರ ವಿರುದ್ಧ ಕ್ರಿಮಿನಲ್ ಕೇಸ್ ಗಳಿವೆ: ಯತೀಂದ್ರ!?

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಅವರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ.

ಕಳೆದ ಕೆಲವು ದಿನಗಳ ಹಿಂದೆ ಪ್ರತಾಪ್ ಸಿಂಹ ಅವರ ವಿರುದ್ಧ ಮಾತನಾಡಿ ಸುದ್ದಿಯಾಗಿದ್ದರು. ಈಗ ಅದೇ ರೀತಿ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿ ಮತ್ತೆ ಸುದ್ದಿಯಾಗಿದ್ದಾರೆ.

ಹೌದು, ಕೇಂದ್ರ ಸಚಿವ ಅಮಿತ್ ಶಾ ಅವರು ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದರೂ ಕೂಡ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಅಮಿತ್ ಶಾ ವಿರುದ್ಧ ಕಾಂಗ್ರೆಸ್ನ ಮುಖಂಡ ಯತೀಂದ್ರ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದು ಹನುರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

 

Related