ದಾವಣಗೆರೆಯಲ್ಲೊಂದು ಕಾನೂನುಬಾಹಿರ ಘಟನೆ ನಡೆದಿದೆ

ದಾವಣಗೆರೆಯಲ್ಲೊಂದು ಕಾನೂನುಬಾಹಿರ ಘಟನೆ ನಡೆದಿದೆ

ದಾವಣಗೆರೆ: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಅದು ಕಾನೂನು ಅಪರಾಧವೆಂದು ಈಗಾಗಲೇ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ. ಇಷ್ಟಾದರೂ ಕೂಡ ರಾಜ್ಯದಲ್ಲಿ ಮತ್ತೆ ದಾವಣಗೆರೆ ಜಿಲ್ಲೆಯಲ್ಲಿ ಮತ್ತೊಂದು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹೌದು ಸುಮಾರು ಹತ್ತು ಜನ ಅಧಿಕ ಶಾಲಾ ಮಕ್ಕಳಿಂದ ಶೌಚಾಲಯ ತೊಳಸಿದ್ದಾರೆ ಎಂದು ತಿಳಿದು ಬಂದಿದೆ. ಶಾಲೆಯ ಸಮವಸ್ತ್ರ ತೊಟ್ಟುಕೊಂಡೆ, ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಗಳನ್ನು ನೋಡಿ ಯಾರು ವಿಡಿಯೋ ಮಾಡಿ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಈ ಘಟನೆಯು ದಾವಣಗೆರೆ ತಾಲೂಕಿನ‌ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಬಕೆಟ್ ನಲ್ಲಿ ನೀರು ತಂದು ಪೊರಕೆಯಿಂದ ಶೌಚಾಲಯ ಸ್ವಚ್ಚ ಗೊಳಿಸುತ್ತಿರುವ ಬಾಲಕಿಯರ ವಿಡಿಯೋ ವೈರಲ್ ಆಗಿದೆ. ಶಾಲೆಯ ಮುಖ್ಯ‌ಶಿಕ್ಷಕಿ ಹೈಸ್ಕೂಲ್ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದಾರೆ. ಸ್ವತಹ ಗಾಂಧಿಜಿಯೇ ತಮ್ಮ ಶೌಚಾಲಯ ಸ್ವಚ್ಚ ಮಾಡಿಕೊಳ್ಳುತ್ತಿದ್ದರು. ನೀವು ಸ್ವಚ್ಚಗೊಳಿಸಿ ಎಂದು ಮುಖ್ಯ ಶಿಕ್ಷಕಿ ಸೂಚನೆ ನೀಡಿದ್ದರಂತೆ. ಮಕ್ಕಳನ್ನ ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿರುವ ಶಾಲೆಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

 

Related