ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿ: ಮುನಿಯಪ್ಪ

ನಾಳೆಯಿಂದ ಅನ್ನಭಾಗ್ಯ ಯೋಜನೆ ಜಾರಿ: ಮುನಿಯಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ನೀಡಿರುವಂತಹ 5 ಗ್ಯಾರಂಟಿಗಳಲ್ಲಿ ಒಂದಾಗಿರುವಂತಹ ಅನ್ನಭಾಗ್ಯ ಯೋಜನೆ ನಾಳೆಯಿಂದ ಜಾರಿ ಮಾಡಲಾಗುತ್ತಿದ್ದು 5 ಕೆಜಿ ಅಕ್ಕಿಯ ಜೊತೆ ಇನ್ನುಳಿದ 5 ಕೆಜಿಯ ಅಕ್ಕಿಯ ಬದಲು ಹಣವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು, ಕರ್ನಾಟಕದಲ್ಲಿ ನಾಳೆಯಿಂದ ಅನ್ನಭಾಗ್ಯ ಜಾರಿಯಾಗಲಿದೆ. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ ಮಾಹಿತಿ ನೀಡಿದ್ದಾರೆ.  ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಮದಿಗೆ ಮಾತನಾಡಿ, 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್​ ಅಕೌಂಟ್ ಇದ್ದಾವೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದ್ರೆ ಕೇಂದ್ರ ಅಕ್ಕಿ ಕೊಟ್ಟಿಲ್ಲ. ಈಗಾಗಲೇ ಈ ಬಗ್ಗೆ ನಿಮಗೆ ಗೊತ್ತಿದೆ. ಅಕ್ಕಿ ಸಿಕ್ಕ ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಅದರಂತೆ ದಕ್ಷಿಣದಲ್ಲಿ ರಾಗಿ ಕೊಡುತ್ತೇವೆ. ಉತ್ತರದಲ್ಲಿ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

 

Related