ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ

ಬೆಂಗಳೂರು : ನಗರದ ಸ್ವಾತಂತ್ರ‍್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಕುಳಿತು ರಾಜ್ಯ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

‘ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ’ ರಾಜ್ಯದ ಸಾವಿರಾರು ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಸೋಮವಾರ ಬೆಳಿಗ್ಗೆ ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ‍್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಧಿವೇಶನ ನಡೆಯುತ್ತಿರುವ ವಿಧಾನಸೌಧದತ್ತ ಹೋಗಿ ಮುತ್ತಿಗೆ ಹಾಕಲು ಮುಂದಾದರು.

ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ‘ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರು ಹಾಗೂ ಕೃಷಿ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಇದರ ವಿರುದ್ಧ ನಮ್ಮ ಈ ಪ್ರತಿಭಟನೆ’ ಎಂದರು.

‘ಪ್ರತಿ ಬಾರಿಯೂ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರಗಳು ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ. ಕೇವಲ ಮಾತಿನಲ್ಲೇ ಭರವಸೆ ನೀಡಿ ಮೌನವಾಗುತ್ತಿವೆ. ಈ ಬಾರಿ ಮೌನ ಮುರಿದು ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟ ಹಿಂಪಡೆಯುವುದಿಲ್ಲ’ ಎಂದೂ ಅವರು ಎಚ್ಚರಿಸಿದರು.

Related