ಹಾಲಶ್ರೀ ಮತ್ತೊಂದು ವಂಚನೆ ಬಯಲು

ಹಾಲಶ್ರೀ ಮತ್ತೊಂದು ವಂಚನೆ ಬಯಲು

ಬೆಂಗಳೂರು,ಸೆ.23:ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವ ಕೋಟ್ಯಂತರ ವಂಚನೆ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಇನ್ನೊಂದು ವಂಚನೆ ಕೃತ್ಯ ಬಯಲಾಗಿದೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್ ಚಡವಾಳ ಅವರಿಗೆ ಹಾಲಶ್ರೀ ವಂಚನೆ ಮಾಡಿದ್ದಾರೆ. ಟಿಕೆಟ್ ಕೊಡಿಸುವಲ್ಲಿ ವಿಫಲರಾದ ಹಾಲಶ್ರೀ . ಅದಾದ ಬಳಿಕ ಸಂಜಯ್ ಹಣ ವಾಪಸ್ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದು ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಬೆಳಕಿಗೆ ಬಂದಿತ್ತು.
ಸಂಜಯ್ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು
ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್ ನಡೆದಿರುವ ಮಾತುಕತೆ, ಫೋನ್ ಕಾಲ್ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ.

Related