ರಾಜ್ಯದಲ್ಲಿಕಮಲಕ್ಕೆ ಮತ್ತೊಂದು ಶಾಕ್

ರಾಜ್ಯದಲ್ಲಿಕಮಲಕ್ಕೆ ಮತ್ತೊಂದು ಶಾಕ್

ಬೆಂಗಳೂರು: 2023ನೇ ವಿಧಾನಸಭಾ ಚುನಾವಣೆಗೂ ಮುನ್ನ ಕರ್ನಾಟಕ ರಾಜ್ಯದಲ್ಲಿ ಸದ್ದು ಮಾಡಿದ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪವನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿದ್ದ ಕಮಿಷನ್ ಆರೋಪದ ತನಿಖೆಯನ್ನು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಎಚ್​ಎನ್​ ನಾಗಮೋಹನ್​ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಒಂದು ತಿಂಗಳು ದಿನಗಳ ಒಳಗೆ ನೀಡಬೇಕು. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕೆಂದು ಆದೇಶದಲ್ಲಿ ಸೂಚಿಸಿದೆ.

 

Related