ʼಕೈʼ ಗೆ ಮತ್ತೊಂದು ಶಾಕ್

ʼಕೈʼ ಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದಲ್ಲಿ ದಿನಗಣನೆ ಪ್ರಾರಂಭವಾಗಿದ್ದು ಆಪರೇಷನ್ ಹಸ್ತ ಮತ್ತು ಆಪರೇಷನ್ ಕಮಲ ಜೋರಾಗಿ ನಡೆಯುತ್ತಿದೆ.

ಈ ಬಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಶುಶ್ರುತ್ ಗೌಡ ಅವರು ಇಂದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾದಂತಿದೆ.

ಇಂದು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸಮ್ಮುಖದಲ್ಲಿ ಡಾ. ಶುಶ್ರುತ್ ಗೌಡ ಬಿಜೆಪಿ ಸೇರಿದ್ದಾರೆ.

ಇವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಇಂದು ಬಿಜೆಪಿ ಸೇರಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಉಪಸ್ಥಿತರಿದ್ದರು.

 

Related