ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದ ರಾಜಧಾನಿ ಬೆಂಗಳೂರು ನಗರವನ್ನು ಅಭಿವೃದ್ಧಿ ಮಾಡುವ ಕನಸನ್ನು ಹೊಂದಿರುವ ಅವರು ಈಗಾಗಲೇ ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಅವರು ಮತ್ತೆ ಇದೀಗ ಮತ್ತೊಂದು ಅಭಿವೃದ್ಧಿ ಕಾಮಗಾರಿಯನ್ನು ಘೋಷಿಸಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಮತ್ತೊಂದು ಟನಲ್ ರೋಡ್ ನಿರ್ಮಾಣ ಮಾಡಲು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದವರೆಗೆ 1.5 ಕಿ.ಲೋ ಮೀಟರ್ ಉದ್ದದ ಹೊಸ ಟನಲ್ ರಸ್ತೆ ನಿರ್ಮಾಣವಾಗಲಿದೆ ಎಂದು ಡಿಸಿಎಂ ಘೋಷಣೆ ಮಾಡಿದ್ದಾರೆ.
ಮುಂದಿನ ಕ್ಯಾಬಿನೆಟ್ನಲ್ಲಿ ಯೋಜನೆಗೆ ಅನುಮತಿ ಪಡೆದು, 2 ವರ್ಷದಲ್ಲಿ ಕಾಮಗಾರಿ ಮುಗಿಸುತ್ತೇವೆ. ವಿಶೇಷ ಹೊಸ ತಂತ್ರಜ್ಞಾನದ ಮೂಲಕ ಈ ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದಿದ್ದಾರೆ. ಈ ಮೊದಲು ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಹೆಬ್ಬಾಳದವರೆಗೆ ಸುರಂಗ ಮಾರ್ಗ ಘೋಷಣೆಯಾಗಿತ್ತು. 16.75 ಕಿಲೋಮೀಟರ್ ಉದ್ದದ ಸುರಂಗ ರಸ್ತೆಯನ್ನು ನಿರ್ಮಿಸಲು ದೇಶದ ಹತ್ತು ಪ್ರಮುಖ ಕಂಪನಿಗಳು ಆಸಕ್ತಿಯನ್ನು ತೋರಿಸಿವೆ. ಸುಮಾರು 17,698 ಕೋಟಿ ರೂ. ವೆಚ್ಚದ ಈ ಯೋಜನೆಯ ಗುತ್ತಿಗೆ ಪಡೆಯುವ ಕಂಪನಿಗಳು ನಿರ್ಮಾಣ ವೆಚ್ಚದ 60 % ರಷ್ಟು ಹೂಡಿಕೆ ಮಾಡಬೇಕಾಗುತ್ತದೆ ಎನ್ನುವ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
