ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸಾವು..!

ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸಾವು..!

ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ದುರಂತವೊಂದು ಸಂಭವಿಸಿದ್ದು,ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿ ಹಳ್ಳಿ ಬಳಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿ ಹಳ್ಳಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Related