ಡಿಸಿಎಂ ಭೇಟಿ ಮಾಡಿದ ಎಪಿಸಿಸಿ ಅಧ್ಯಕ್ಷೆ

ಡಿಸಿಎಂ ಭೇಟಿ ಮಾಡಿದ ಎಪಿಸಿಸಿ ಅಧ್ಯಕ್ಷೆ

ಬೆಂಗಳೂರು: ಹೊಸತೊಡಕಿನ ದಿನದಂದು ಇಂದು ಬೆಳ್ಳಂಬೆಳ್ಳಗ್ಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ಅವರನ್ನು ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಅವರ ಕಿರಿಯ ಸಹೋದರಿಯಾಗಿರುವ ವೈ ಎಸ್ ಶರ್ಮಿಲಾ ರೆಡ್ಡಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಯಾವ ಕಾರಣಕ್ಕೆ ಭೇಟಿ ನೀಡಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಶರ್ಮಿ ರೆಡ್ಡಿ ಅವರು ಡಿಕೆ ಶಿವಕುಮಾರ್ ಅವರನ್ನು ಯಾವ ಕಾರಣಕ್ಕೆ ಭೇಟಿ ಮಾಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿಲ್ಲ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಉಪಸ್ಥಿತರಿದ್ದರು.

 

 

Related