ತಾ.ಪಂ ಚುನಾವಣೆಗೆ ಎಪಿಪಿ ಸ್ಪರ್ಧೆ

ತಾ.ಪಂ ಚುನಾವಣೆಗೆ ಎಪಿಪಿ ಸ್ಪರ್ಧೆ

ವಿಜಯಪುರ : ಮುಂಬರುವ ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾ.ಪಂ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯ ಉಮೇದುವಾರರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರೋಹನ್ ಐನಾಪುರ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಸಂಬಂಧ  ಈಗಾಗಲೇ ಪ್ರತಿ ವಾರ್ಡ್ಗಳಿಗೆ ಭೇಟಿ ನೀಡಿ ಆಸಕ್ತರೊಂದಿಗೆ ಚರ್ಚಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ 35 ವಾರ್ಡ್ ಗಳಿಗೆ ಪಕ್ಷದ ಉಮೇದುವಾರರು ಸ್ಪರ್ಧಿಸಲಿದ್ದಾರೆ ಎಂದರು.

ಎಂಟು ವಾರ್ಡ್ ಗಳಿಗೆ  ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಶಿಕ್ಷಣ, ಆರೋಗ್ಯ, ವಿದ್ಯುತ್, ನೀರು ಸೇರಿದಂತೆ ಮೂಲಸೌಲಭ್ಯಗಳನ್ನು ಜನರಿಗೆ ಉಚಿತವಾಗಿ ಒದಗಿಸುವುದು ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಪಕ್ಷದ ಮುಖಂಡರಾದ ಅಬ್ದುಲ್ ಹಮೀದ್ ಶೇಖ್, ನಿಹಾದ್ ಅಹ್ಮದ್ ಗೋಡಿಯಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Related