ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮನವಿ

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಮನವಿ

ಗಂಗಾವತಿ : ತಾಲೂಕಿನ ಇತಿಹಾಸ ಸುಪ್ರಸಿದ್ಧ ಅಂಜನಾದ್ರಿ ಬೆಟ್ಟ ಸಂಪೂರ್ಣ ಅಭಿವೃದ್ಧಿಗೆ ಮತ್ತು ಪ್ರವಾಸಿತಾಣವನ್ನಾಗಿ ಮಾರ್ಪಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಸಿಎಂ ಭೇಟಿಯಾದ ಸಂದರ್ಭದಲ್ಲಿ ಮನವಿ ನೀಡಿದರು.

ಈ ಭಾಗದ ಐತಿಹಾಸಿಕ ವಿಶ್ವವಿಖ್ಯಾತ ಕಿಸ್ಕಿಂದ ಪರ್ವತ ಮತ್ತು ಹನುಮ ಜನಿಸಿದ ನಾಡು ಎಂದೇ ಖ್ಯಾತಿ ಹೊಂದಿರುವ ಅಂಜನಾದ್ರಿ ಬೆಟ್ಟದ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದು ಮತ್ತು ಅಲ್ಲಿನ ಸುತ್ತಮುತ್ತಲಿನ ಸ್ಥಳಗಳನ್ನು, ಸ್ಮಾರಕಗಳನ್ನು ರಕ್ಷಣೆ ಮಾಡಬೇಕು ಹಾಗೂ ಬರುವಂತಹ ಪ್ರವಾಸಿ ಭಕ್ತಾದಿಗಳಿಗೆ ಅನುಕೂಲ ಮಾಡಬೇಕೆಂದು ಮನವಿ ಮಾಡಿಕೊಂಡರು.

ಈಗಾಗಲೇ ಅಂಜನಾದ್ರಿ ಬೆಟ್ಟಕ್ಕೆ ದಿನನಿತ್ಯ ಉತ್ತರ ಭಾರತದಿಂದ ದಕ್ಷಿಣ ಭಾರತದಿಂದ ಸಾವಿರಾರು ಜನರು ಬಂದು ಸ್ವಾಮಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಭಕ್ತಾದಿಗಳಿಗೆ ಮೂಲ ಸೌಕರ್ಯಗಳು ಇಲ್ಲ. ವಸತಿ ಗೃಹ ಇರಬಹುದು, ಸ್ನಾನದ ಸೌಲಭ್ಯಗಳ ಇರಬಹುದು, ಬಂದAತಹ ಭಕ್ತಾದಿಗಳಿಗೆ ಸರಿಯಾದ ಯಾವುದೇ ಮೂಲ ಸೌಕರ್ಯಗಳು ಇಲ್ಲ.

ವಯಸ್ಸಾದವರಿಗೆ ಬೆಟ್ಟ ಹತ್ತಲಿಕ್ಕೆ ಬಹಳ ಕಷ್ಟವಾಗುತ್ತದೆ. ಅವರಿಗಾಗಿ ಸ್ವಯಂ ಚಾಲಿತ ತೂಗು ಸೇತುವೆ ರೋಪ್ ವೇ ನಿರ್ಮಾಣ ಮಾಡಬೇಕು. ಎಲ್ಲ ರೀತಿಯಿಂದ ಈ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲ ಮಾಡಬೇಕೆಂದು, ಇದರ ಜೊತೆಗೆ ರಾಜ್ಯ, ಕೇಂದ್ರ ಸರ್ಕಾರ ವಿಶೇಷ ಅನುದಾನದಲ್ಲಿ ಪ್ರಸಿದ್ಧ ತಾಣ ಅಭಿವೃದ್ಧಿ ಪಡಿಸಬೇಕೆಂದು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಸಿಎಂ ಬಳಿ ಮನವಿ ಮಾಡಿಕೊಂಡರು.

Related